Warning: array_intersect(): Expected parameter 2 to be an array, null given in /home/u327821803/domains/todayexpress.in/public_html/wp-content/plugins/page-or-post-clone/page-or-post-clone.php on line 123

Warning: include_once(/home/u327821803/domains/todayexpress.in/public_html/wp-includes/header.php): failed to open stream: No such file or directory in /home/u327821803/domains/todayexpress.in/public_html/wp-config.php on line 91

Warning: include_once(): Failed opening '/home/u327821803/domains/todayexpress.in/public_html/wp-includes/header.php' for inclusion (include_path='.:/opt/alt/php74/usr/share/pear') in /home/u327821803/domains/todayexpress.in/public_html/wp-config.php on line 91
ಅಫ್ಘಾನ್ ವಿರುದ್ಧ ನ್ಯೂಜಿಲ್ಯಾಂಡ್ ಗೆ ಭರ್ಜರಿ ಜಯ: ಟೀಂ ಇಂಡಿಯಾದ ಕನಸು ಭಗ್ನ – Today Express

ಅಫ್ಘಾನ್ ವಿರುದ್ಧ ನ್ಯೂಜಿಲ್ಯಾಂಡ್ ಗೆ ಭರ್ಜರಿ ಜಯ: ಟೀಂ ಇಂಡಿಯಾದ ಕನಸು ಭಗ್ನ

 ಅಫ್ಘಾನ್ ವಿರುದ್ಧ ನ್ಯೂಜಿಲ್ಯಾಂಡ್ ಗೆ ಭರ್ಜರಿ ಜಯ: ಟೀಂ ಇಂಡಿಯಾದ ಕನಸು ಭಗ್ನ

ದುಬೈ : ಟಿ 20 ವಿಶ್ವಕಪ್ ಟೂರ್ನಿಯಲ್ಲಿ  ಅಫ್ಘಾನಿಸ್ತಾನ್ ವಿರುದ್ದ ನ್ಯೂಜಿಲೆಂಡ್ ಜಯಭೇರಿ ಬಾರಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇದೇ ವೇಳೆ ಟೀಮ್ ಇಂಡಿಯಾ ಟಿ 20 ವಿಶ್ವಕಪ್​ನಿಂದ ಹೊರಬಿದ್ದಿದೆ. ಟಿ20 ವಿಶ್ವಕಪ್ ಪಂದ್ಯಾವಳಿಯ ಇಂದು ನಡೆದ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಅಫ್ಘಾನಿಸ್ಥಾನವನ್ನು ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ಥಾನ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿ ಭಾರತೀಯ ಆಶಾವಾದಿಗಳಿಗೆ ನಿರಾಸೆ ಮೂಡಿಸಿತು. ಗುರಿ ಬೆನ್ನಟ್ಟಿದ ಕಿವೀಸ್ ಪಡೆ 18.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 125 ರನ್ ಗಳಿಸುವ ಮೂಲಕ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಸೆಮಿ ಫೈನಲ್ ಗೆ ಪ್ರವೇಶ ಪಡೆಯಿತು.

ನ್ಯೂಜಿಲೆಂಡ್​ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ ಮಾತ್ರ ಸೆಮಿಫೈನಲ್​ಗೇರುವ ಅವಕಾಶ ಟೀಮ್ ಇಂಡಿಯಾಗಿತ್ತು. ಆದರೆ ನ್ಯೂಜಿಲೆಂಡ್ ಗೆದ್ದು 8 ಅಂಕದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ ಭಾರತ ತಂಡದ ಕನಸು ಭಗ್ನಗೊಂಡಿದೆ.