ಕೊರೊನಾದಿಂದ ಮೃತಪಟ್ಟವರ ಕುಟಂಬಕ್ಕೆ 1 ಲಕ್ಷ ರೂ. ಪರಿಹಾರ: ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು: ಕೋವಿಡ್ ನಿಂದ ಮೃತರಾದವರ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ಕೊರೊನಾದಿಂದ ಮೃತಪಟ್ಟ ಕುಟುಂಬದವರಿಗೆ ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಒಂದು ಲಕ್ಷ ಪರಿಹಾರ ಘೋಷಿಸಿತ್ತು. ಸಧ್ಯ ಆ ಯೋಜನೆಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 7729 ಅರ್ಜಿಗಳು ಸ್ವೀಕೃತವಾಗಿವೆ. ಇನ್ನು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.
ಇನ್ನೂ ಕೇಂದ್ರ ಸರ್ಕಾರ ಕೂಡ ಕೊರೊನಾದಿಂದ ಮೃತಪಟ್ಟ ಎಲ್ಲರಿಗೂ 50 ಸಾವಿರ ನೀಡಲು ನಿರ್ಧರಿಸಿದೆ. ಈ ಪರಿಹಾರಕ್ಕೆ ದಾಖಲೆ ಇಲ್ಲದೆ ನಿಧನರಾದವರನ್ನೂ ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಅದ್ರಂತೆ, ನಾವು ಕೂಡ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇವೆ ಎಂದರು. ಜಿಲ್ಲಾಧಿಕಾರಿಗಳಿಗೆ ರಾಜ್ಯಾದ್ಯಂತ ಪರಿಹಾರ ವಿತರಣೆ ಮಾಡಲು ಸೂಚಿಸಲಾಗಿದೆ. ಇನ್ನು ತಂದೆ ತಾಯಿಗಳನ್ನ ಕಳೆದಕೊಂಡ ಮಕ್ಕಳ ಜವಾಬ್ದಾರಿ ನೋಡಿಕೊಳ್ಳಲು ಸರ್ಕಾರ ಬದ್ದವಾಗಿದೆ ಎಂದರು.