ಗೋವಾ ಚುನಾವಣೆ ಕಾಂಗ್ರೆಸ್ ಸಿದ್ಧತೆ: ಬಿರುಸಿನ ಪ್ರಚಾರಕ್ಕೆ ರಾಹುಲ್ ಗಾಂಧಿ ಸೂಚನೆ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಬರದ ಸಿದ್ಧತೆ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಸೂಚಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಸೂಚನೆ ನೀಡಿದ್ದಾರೆಂದು ಕಾಂಗ್ರೆಸ್’ನ ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರು ಹೇಳಿದ್ದಾರೆ.
ಗೋವಾದಲ್ಲಿ ಆಡಳಿತರೂಢ ಬಿಜೆಪಿಯನ್ನು ಸೋಲಿಸಿ, ಬಹುಮತದ ಮೂಲಕ ಗೆಲುವು ಸಾಧಿಸಬೇಕೆಂದು ರಾಹುಲ್ ಗಾಂಧಿ ಬಯಸಿದ್ದಾರೆ. ಇದಕ್ಕಾಗಿ ಈಗಿನಿಂದಲೇ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ. 2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ’ ಎಂದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಚುನಾವಣಾ ವೀಕ್ಷಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಾನಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದಿಗಂಬರ್ ಕಾಮತ್ ಸಭೆಯಲ್ಲಿ ಭಾಗವಹಿಸಿದ್ದರು.