ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಣಬೀರ್ ಆಲಿಯ

ಲಬಾಲಿವುಡ್ ಸ್ಟಾರ್ ಕಪಲ್ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಂದ್ರಾದ ರಣಬೀರ್ ಕಪೂರ್ ನಿವಾಸದಲ್ಲಿ ವಿವಾಹ ನಡೆದಿದೆ. ಕುಟುಂಬಸ್ಥರ ಸಮ್ಮುಖದಲ್ಲಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ಪಂಜಾಬಿ ಸಂಪ್ರದಾಯದಂತೆ ವಿವಾಹ ಜರುಗಿದೆ. ಈ ಜೋಡಿ ಮದುವೆಯಾದ ಕೆಲ ಗಂಟೆಗಳಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇವರು ಇಂದು ಅಧಿಕೃತವಾಗಿ ಮಿಸ್ಟರ್ ಆಯಂಡ್ ಮಿಸಸ್ ಕಪೂರ್ ಆಗಿದ್ದಾರೆ. ಬಾಲಿವುಡ್ನ ಪ್ರಣಯ ಪಕ್ಷಿಗಳಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೇ ಟ್ವಿಟರ್ನಲ್ಲಿ ಟ್ರೆಂಡ್ ಸೃಷ್ಟಿಸಿವೆ. ಸುಮಾರು ೫ ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇಂದು ಸಪ್ತಪದಿ ತುಳಿದಿದ್ದಾರೆ.
ಭಾರಿ ಗೌಪ್ಯತೆಯಿಂದ ನಡೆದ ಬಾಲಿವುಡ್ ಜೋಡಿಯ ಈ ಮದುವೆ ಇಂದು ಕೊನೆಗೂ ಬಹಿರಂಗವಾಗಿದೆ. ಇಬ್ಬರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಮದುವೆಯನ್ನು ದೃಢೀಕರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಫೋಟೋಗಳಲ್ಲಿ ಪತ್ನಿ ಆಲಿಯಾ ಭಟ್ಗೆ ರಣಬೀರ್ ಕಪೂರ್ ಚುಂಬಿಸಿದ ಫೋಟೋ ಸಖತ್ ಸದ್ದು ಮಾಡುತ್ತಿದೆ.