ದೇಶ ಭಕ್ತರು ಬೆಂಕಿ ಹಚ್ಚುವ ಕೆಲಸ ಮಾಡಬಾರದು

 ದೇಶ ಭಕ್ತರು ಬೆಂಕಿ ಹಚ್ಚುವ ಕೆಲಸ ಮಾಡಬಾರದು

ಮೈಸೂರು: ದೇಶ ಭಕ್ತರು ದೇಶ ಕಾಯೋದಕ್ಕೆ ಹೋಗುತ್ತಾರೆ. ಬೆಂಕಿ ಹಚ್ಚುವ ಕೆಲಸ ಮಾಡಬಾರದು. ನೇರವಾಗಿ ಹೇಳುತ್ತಿದ್ದೇನೆ. ಈ ಗಲಾಟೆಯಿಂದ ಕಾಂಗ್ರೆಸ್ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಭಾನುವಾರ ವಿಶ್ವ ಯೋಗ ದಿನದ ಸಿದ್ಧತೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿ ಪಥ ಒಂದು ಒಳ್ಳೆಯ ಯೋಜನೆ. ಅದಕ್ಕಾಗಿ ಯುವ ಜನಾಂಗ ಮೋದಿಗೆ ಅಭಿನಂದನೆ ಸಲ್ಲಿಸಬೇಕು. ಕರ್ನಾಟಕ ರಾಜ್ಯದ ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ ಸೇರಿದಂತೆ ಬೇರೆ ಬೇರೆ ಸೆಕ್ಯೂರಿಟಿ ಏಜೆನ್ಸಿಗಳಲ್ಲಿ ಅವರಿಗೆ ಉದ್ಯೋಗ ಕೊಡಲು ವ್ಯವಸ್ಥೆ ಮಾಡಲಾಗಿದೆ ಎಂದು ನುಡಿದರು.
ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಭದ್ರತೆ ವ್ಯವಸ್ಥೆಯನ್ನು ವೀಕ್ಷಣೆ ಮಾಡಿದ್ದೇನೆ. ಮೈಸೂರಿನಲ್ಲಿ ಮೋದಿ ಯೋಗ ಮಾಡುತ್ತಿರುವುದು ನಮ್ಮ ಹೆಮ್ಮೆ. ವಿಶ್ವ ಯೋಗ ದಿನಕ್ಕೆ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಎಲ್ಲ ಸಿದ್ಧತೆ ಮಾಡಲಾಗಿದೆ. ಗೃಹ ಇಲಾಖೆ ಎಲ್ಲ ಏರ್ಪಾಡುಗಳನ್ನು ಮಾಡಿಕೊಂಡಿದೆ. ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.