ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಕೆ.ವೈ ನಂಜೇಗೌಡ ಕರೆ

ಮಾಲೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡರೇ, ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಮಾಲೂರು ಶಾಸಕರಾದ ಕೆ.ವೈ ನಂಜೇಗೌಡರು ಹೇಳಿದರು. ತಾಲ್ಲೂಕಿನ ಹುಳದೇನಹಳ್ಳಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ, ಅವರು ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದ ಮಾಜಿ ಪ್ರಾಧಾನಿ ಮನಮೋಹನ್ ಸಿಂಗ್ ರನ್ನು ಇಂದು ದೇಶ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನರೇಗಾ ಯೋಜನೆಯಲ್ಲಿ ಗ್ರಾಮಗಳ ಅಭಿವೃದ್ಧಿ ಸಾಕಷ್ಟು ಅವಕಾಶಗಳಿವೆ. ಒಂದು ವರ್ಷದಲ್ಲಿ ಒಂದು , ಎರಡು ಕೋಟಿಯಷ್ಟು ಹಣ ಬಳಕೆಗೆ ಅವಕಾಶ ಇದೆ. ಆದರೆ ಬೇರೆ ಯಾವುದೇ ಯೋಜನೆಗಳಲ್ಲಿ ಗ್ರಾಮ ಪಂಚಾಯತಿಗಳಿಗೆ ಇಷ್ಟು ಹಣ ಬರುವುದಿಲ್ಲ ಎಂದು ಕಿವಿಮಾತು ಹೇಳಿದರು.

ನರೇಗಾ ಯೋಜನೆಯಡಿಯಲ್ಲಿ ಈ ಸ್ವಚ್ಛ ಸಂಕೀರ್ಣ ನಿರ್ಮಾಣವಾಗಿದ್ದು, ಮುಂದಿನ ದಿನಗಳ ಗ್ರಾಮಗಳಲ್ಲಿ ಗ್ರಾಮಗಳಲ್ಲಿನ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಅದನ್ನು ವೈಜ್ಞಾನಿಕವಾಗಿ ವಿಂಗಡಿಸಿ, ಅದನ್ನು ಮಾರಾಟ ಮಾಡಲು ಅವಕಾಶವಿದೆ. ಈ ಮೂಲಕ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಕರೆ ನೀಡಿದರು.
ಈ ವೇಳೆ ಮಾತನಾಡಿದ ಮಾಲೂರು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ ಕೃಷ್ಣಪ್ಪರವರು ಮಾತಾಡಿ, ಮಾಲೂರು ತಾಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲೇ ಮೊದಲ ಬಾರಿಗೆ ಹುಳದೇನಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗಿದೆ. ಈ ಮೂಲಕ ಇತರೆ ಗ್ರಾಮ ಪಂಚಾಯತಿಗಳಿಗೆ ಮಾದರಿಯಾಗಿದೆ. ಸ್ವಚ್ಛ ಭಾರತ ಯೋಜನೆ ಜಾರಿ ನಂತರ ಗ್ರಾಮಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಿ, ಜಿಲ್ಲೆ ಬಯಲು ಬಹಿರ್ದೆಸೆ ಮುಕ್ತ ವಾಗಿದೆ. ಅದೇ ರೀತಿ ಒಣ ಕಸ ಸಂಗ್ರಹಿಸುವ ಮೂಲಕ ಗ್ರಾಮಗಳು ಕಸ ಮುಕ್ತವಾಗಬೇಕು. ಗ್ರಾಮಗಳು ಕಸ ಮುಕ್ತವಾದರೆ ರೋಗಮುಕ್ತವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಸೂರ್ಯನಾರಾಯಣರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಎಸ್. ಹೇಮಾಮಾಲನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಹಮ್ಮದ್ ಅಲಿ ಖಾನ್, ಗ್ರಾಮ ಪಂಚಾಯತಿ ಸದಸ್ಯರು, ತಾಲ್ಲೂಕು IEC ಸಂಯೋಜಕರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ದರು.