ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಶಿವಮೊಗ್ಗದಲ್ಲಿ ಈಶ್ವರಪ್ಪ ಘೋಷಣೆ

ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಇಂದು ನಗರದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು. ಇದು ಬಿಜೆಪಿ ಸರ್ಕಾರದ ಎರಡನೇ ವಿಕೆಟ್ ತನವಾದಂತಾಗಿದೆ.
ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಆ ಬಗ್ಗೆ ತನಿಖೆಯಿಂದ ಎಲ್ಲಾ ಸತ್ಯಾಸತ್ಯತೆ ತಿಳಿದು ಬರಲಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇನೆ. ತನಿಖೆಯಿಂದ ನಾನು ನಿರ್ದೋಷಿ ಎಂಬುದಾಗಿ ಹೊರಬರಲಿದೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸೋದಾಗಿ ಘೋಷಿಸಿದರು.
ನಾಳೆ ಮುಖ್ಯಮಂತ್ರಿ ಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತೇನೆ. ಈ ಕುರಿತು ನಾನು ಸಿಎಂ ಜೊತೆಗೂ ಚರ್ಚೆ ಮಾಡಿದ್ದೇನೆ. ಸಿಎಂ ಹಾಗೂ ಎಲ್ಲ ಸ್ನೇಹಿತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಪಕ್ಷಕ್ಕೆ ಮುಜುಗರವಾಗಬಾರದೆಂದು ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ನಾಳೆ ಸಂಜೆ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ. ರಾಜೀನಾಮೆ ನೀಡುವ ಬಗ್ಗೆ 3-4 ದಿನದ ಹಿಂದೆ ನಿರ್ಧರಿಸಿದ್ದೆ ಎಂದು ಹೇಳಿದರು.
ನಿನ್ನೆಯಷ್ಟೆ ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.
ಇದನ್ನೆಲ್ಲ ಈ ಬೆನ್ನಲ್ಲೇ ವಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿ ಹೋರಾಟ ನಡೆಸಿದ್ದವು.
ನಿನ್ನೆಯಷ್ಟೇ ರಾಜೀನಾಮೆಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದರು. ಆದರೆ ಇಂದು ಸುದ್ದಿಗೋಷ್ಠಿ ಕರೆದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ
ಸಂತೋಷ್ ಪಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಬುಧವಾರ ಸಂತೋಷ್ ಅವರ ಸಹೋದರ ಪ್ರಶಾಂತ್ ದೂರು ದಾಖಲಿಸಿದ್ದು, ಈ ದೂರಿನಲ್ಲಿ ಸಚಿವ ಕೆ. ಎಸ್. ಈಶ್ವರಪ್ಪ ಅವರೇ ಮೊದಲ ಆರೋಪಿ ಆಗಿದ್ದಾರೆ. ಈಶ್ವರಪ್ಪ ಅವರ ಆಪ್ತ ಸಹಾಯಕರ ಹೆಸರನ್ನೂ ದೂರಿನಲ್ಲಿ ನಮೂದಿಸಲಾಗಿದೆ. ಐಪಿಸಿ ಸೆಕ್ಷನ್ 306 ಅಡಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಡಿ ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದು, ಎಫ್‌ಐಆರ್‌ನಲ್ಲೂ ಮೊದಲ ಆರೋಪಿ ಎಂದೇ ನಮೂದಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಹಿಂಡಲಗ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ. ಸಂತೋಷ್ ಪಾಟೀಲ್ ಗುತ್ತಿಗೆ ಕಾಮಗಾರಿಯೊಂದರಲ್ಲಿ ಸಚಿವ ಈಶ್ವರಪ್ಪ ವಿರುದ್ಧ 40% ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕೆಲ ತಿಂಗಳ ಹಿಂದೆ ಸುದ್ದಿಯಾಗಿದ್ದರು. ಅವರ ಆರೋಪವನ್ನು ತಳ್ಳಿಹಾಕಿದ್ದ ಹಿರಿಯ ಸಚಿವ ಈಶ್ವರಪ್ಪ ಸಂತೋಷ್ ಪಾಟೀಲ್ ವಿರುದ್ಧ ನ್ಯಾಯಾಲಯದ ಮೊರೆ ಹೋಗಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಅದು ವಿಚಾರಣೆ ಹಂತದಲ್ಲಿರುವಾಗಲೇ ಸಂತೋಷ್ ಪಾಟೀಲ್ ನಿನ್ನೆ ಏಪ್ರಿಲ್ 12ರಂದು ಉಡುಪಿಯ ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣದ ಬಳಿಯಿರುವ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂಬ ಸಂದೇಶವನ್ನು ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ವಾಟ್ಸಪ್ ಮಾಡಿದ್ದರು. ಹೀಗಾಗಿ ಸಚಿವರಾದ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತ್ತು.