ನ.7 ರಂದು ಶಿವಾರ್ಚಕ ಸಂಘದ ಚುನಾವಣೆ

ಮೈಸೂರು: ಕರ್ನಾಟಕ ರಾಜ್ಯ ಶಿವಾರ್ಚಕ ಸಂಘದ 2020-21ನೇ ಸಾಲಿನ ಕಾರ್ಯಕಾರಿ ಸಮಿತಿಯ ಚುನಾವಣೆಯು ನ.7ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ.ಮೈಸೂರು ನಗರದ ವಿದ್ಯಾರಣ್ಯಪುರಂನ ಒಕ್ಕಲಿಗ ಸಮುದಾಯ ಭವನದಲ್ಲಿ ಮತದಾನ ನಡೆಯಲಿದ್ದು, ಸಂಘದ ಸದಸ್ಯತ್ವ ಪಡೆದಿರುವವರು ಮತದಾನ ಮಾಡಬಹುದಾಗಿದೆ. ಕಣದಲ್ಲಿದ್ದ 34 ಅಭ್ಯರ್ಥಿಗಳಲ್ಲಿ 8 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯುವುದರೊಂದಿಗೆ 13 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಕಿ ಉಳಿದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಸಹಕಾರ್ಯದರ್ಶಿ ಸ್ಥಾನಗಳಿಗೆ ಭಾನುವಾರ ಮತದಾನ ನಡೆಯಲಿದೆ.