ಭವಾನಿಪುರಉಪಚುನಾವಣೆಯಲ್ಲಿ ಮಮತಾಗೆ ಭರ್ಜರಿಗೆ ಗೆಲವು: ದೀದಿಯ ಸಿಎಂ ಕುರ್ಚಿ ಭದ್ರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಬಾನಿಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಇಡೀ ದೇಶದ ಗಮನ ಸೆಳೆದಿದ್ದ ಉಪಚನಾವಣೆಯಲ್ಲಿ ಮಮತಾ ಬ್ಯಾನರ್ಜಿ 58,832 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಮೂಲಕ ತಮ್ಮ ಮುಖ್ಯಮಂತ್ರಿ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, ನಾನು ಭವಾನಿಪುರ ಉಪ ಚುನಾವಣೆಯಲ್ಲಿ 58,832 ಮತಗಳ ಅಂತರದಲ್ಲಿ ಗೆದ್ದಿದ್ದೇನೆ. ಇಲ್ಲಿರುವ ಶೇ 46ರಷ್ಟು ಜನರು ಬೆಂಗಾಲಿಗಳಲ್ಲ. ಆದರೂ ಅವರೆಲ್ಲಾ ನನಗೆ ಮತ ನೀಡಿದ್ದಾರೆ. ಕೇಂದ್ರ ಸರ್ಕಾರ ನಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಷಡ್ಯಂತ್ರ ಮಾಡಿದೆ. ನಮಗೆ ಮತ ನೀಡಿದ ಜನರಿಗೆ ನಾನು ಅಭಾರಿಯಾಗಿದ್ದೇನೆ ಎಂದರು.
ಮಮತಾ ಎದುರಾಳಿಯಾಗಿದ್ದ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ 25 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಬಿಜೆಪಿ ಉಪ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಟಿಎಂಸಿ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೇರಿತ್ತು. ಆದರೆ ನಂದಿಗ್ರಾಮದಲ್ಲಿ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದರು. ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದ ಅವರು ನವೆಂಬರ್ 5ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿತ್ತು. ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ ಶಾಸಕರಾಗಿ ಆಯ್ಕೆಯಾಗಬೇಕು ಎಂಬ ಕಾರಣಕ್ಕೆ ಹಿಂದಿನ ಚುನಾವಣೆಯಲ್ಲಿ ಭವಾನಿಪುರದಲ್ಲಿ ಗೆದ್ದಿದ್ದ ಸೋವನ್‌ದೇವ್ ಚಟ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
. ಇನ್ನೂ ಚುನಾವಣಾ ಕಣದಲ್ಲಿ ಟಿಎಂಸಿ, ಬಿಜೆಪಿಯಲ್ಲದೆ, ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಕಣದಲ್ಲಿದ್ದರು. ಕಾಂಗ್ರೆಸ್ ಪಕ್ಷ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಸೆಪ್ಟೆಂಬರ್ 30 ರಂದು ಚುನಾವಣೆಗೆ ಹೋದ ಬಾಬನಿಪುರದಲ್ಲಿ ಶೇ. 53.32 ರಷ್ಟು ಸಾಧಾರಣ ಮತದಾನವಾಗಿತ್ತು.