ಮಂಡ್ಯ : 11 ಕಲ್ಲು ಗಣಿಗಾರಿಕೆ ರದ್ದು
ಜಿಲ್ಲೆಯಲ್ಲಿ ಪರಿಸರ ವಿಮೋಚನಾ ಪತ್ರ ಪಡೆಯದಿದ್ದ ಜಿಲ್ಲೆಯ 11 ಕಲ್ಲು ಗಣಿ ಗುತ್ತಿಗೆಗಳನ್ನು ಜು.31ರಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್ ಫೊರ್ಸ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಸ್ ಅಶ್ವತಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವದ ವಿಸ್ತರಿಸಿ ನೀಡಿದ ಕಲ್ಲು ಗಣಿ ಗುತ್ತಿಗೆಗೆ ಸಂಬಂಧಿಸಿದಂತೆ ಸಂಬಮಧಪಟ್ಟ ಪ್ರಾದಿಕಾರದಿಂದ ಇದುವರೆಗೂ ಪರಿಸರ ವಿಮೋಚನಾ ಪತ್ರವನ್ನು ಪಡೆದು ಕಚೇರಿಗೆ ಹಾಜರುಪಡಿಸದಿರುವ 11 ಕಲ್ಲು ಗಣಿ ಗುತ್ತಿಗೆಗೆಳನ್ನು ರದ್ದುಪಡಿಸಲು ನರ್ಣಯಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಎಂ.ವಿ ಪದ್ಮಜಾ ತಿಳಿಸಿದ್ದಾರೆ.