ರಾಜಧಾನಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ: ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

 ರಾಜಧಾನಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ: ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹಾಡಹಗಲೇ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಆಲನಹಳ್ಳಿ ಬಳಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.ಕುಳ್ಳ ವೆಂಕಟೇಶ್ ಎನ್ನುವವರೇ ಕೊಲೆಯಾದ ವ್ಯಕ್ತಿ.

ಕುಳ್ಳ ವೆಂಕಟೇಶ್ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ಬಂದ ಐವರು ದುಷ್ಕರ್ಮಿಗಳ ಗುಂಪು, ಆಟೋದಿಂದ ಬೈಕ್ ಗೆ ಡಿಕ್ಕಿ ಹೊಡೆದು ಬೀಳಿಸಿದ್ದಾರೆ. ಕೆಳಗೆ ಬಿದ್ದ ವೆಂಕಟೇಶ್ ಮೇಲೆ ಲಾಂಗು, ಮಚ್ಚಿನಿಂದ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ದುಷ್ಕೃತ್ಯ ಎಸಗಿದ ಆರೋಪಿಗಳು ಪರಾರಿಯಾಗಿದ್ದಾರೆ.ಜಮೀನು ವಿಚಾರವಾಗಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಆವಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.