ರಾಜ್ಯದಲ್ಲಿ ಇಳಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ: ಇಂದು 8,425ʼ ಮಂದಿಗೆ ಕೋವಿಡ್

ಬೆಂಗಳೂರು: ಕೊರೋನಾದಿಂದ ಕಂಗೆಟ್ಟಿದ್ದ ನಾಡಿನ ಜನ ಇಂದು ಕೊಂಚ ಸಮಾಧಾನ ಪಡುವ ಸುದ್ದಿ ಬಂದಿದೆ. ರಾಜ್ಯದಲ್ಲಿ ಇಂದು ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 3,822 ಮಂದಿ ಸೇರಿ ರಾಜ್ಯಾದ್ಯಂತ 8,425 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಕಳೆದ 24 ಗಂಟೆಯಲ್ಲಿ 1,29,337 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 3,822 ಸೇರಿದಂತೆ ರಾಜ್ಯದಲ್ಲಿ 8,425 ಜನರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ’ ಎಂದು ತಿಳಿಸಿದ್ದಾರೆ.
ಇಂದು 8,425 ಜನರಿಗೆ ಕೋವಿಡ್ ದೃಢಪಟ್ಟ ಕಾರಣ, ಪಾಸಿಟಿವಿಟಿ ದರ ಶೇ.6.5ಕ್ಕೆ ಇಳಿಕೆ ಕಂಡಿದೆ. ಇನ್ನು ಇಂದು 19,800 ಮಂದಿ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ರಾಜ್ಯದಲ್ಲಿ 97,781 ಸಕ್ರೀಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟು 49 ಮಂದಿ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.