Warning: array_intersect(): Expected parameter 2 to be an array, null given in /home/u327821803/domains/todayexpress.in/public_html/wp-content/plugins/page-or-post-clone/page-or-post-clone.php on line 123

Warning: include_once(/home/u327821803/domains/todayexpress.in/public_html/wp-includes/header.php): failed to open stream: No such file or directory in /home/u327821803/domains/todayexpress.in/public_html/wp-config.php on line 91

Warning: include_once(): Failed opening '/home/u327821803/domains/todayexpress.in/public_html/wp-includes/header.php' for inclusion (include_path='.:/opt/alt/php74/usr/share/pear') in /home/u327821803/domains/todayexpress.in/public_html/wp-config.php on line 91
ವಾಸೀಂ ಅಕ್ರಂ ದಾಖಲೆ ಮುರಿದ ಟೀಂ ಇಂಡಿಯಾ ಆಟಗಾರ; ಟೆಸ್ಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಸಾಲಿಗೆ ಅಶ್ವಿನ್ – Today Express

ವಾಸೀಂ ಅಕ್ರಂ ದಾಖಲೆ ಮುರಿದ ಟೀಂ ಇಂಡಿಯಾ ಆಟಗಾರ; ಟೆಸ್ಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಸಾಲಿಗೆ ಅಶ್ವಿನ್

 ವಾಸೀಂ ಅಕ್ರಂ ದಾಖಲೆ ಮುರಿದ ಟೀಂ ಇಂಡಿಯಾ ಆಟಗಾರ; ಟೆಸ್ಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಸಾಲಿಗೆ ಅಶ್ವಿನ್

ದೆಹಲಿ : ಟೀಂ ಇಂಡಿಯಾ ಆಟಗಾರ  ರವಿಚಂದ್ರನ್ ಅಶ್ವಿನ್ ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಟ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೂರನೇ ದಿನವಾದ ಶನಿವಾರ ಭಾರತದ ಅಗ್ರ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ 415 ನೇ ವಿಕೆಟ್ ಪಡೆದುಕೊಂಡಿದ್ದು, ಈ ಮೂಲಕ ಅವರು ಪಾಕಿಸ್ತಾನದ ದಂತಕಥೆ ವಾಸಿಂ ಅಕ್ರಮ್ ದಾಖಲೆಯನ್ನು ಮುರಿದಿದ್ದಾರೆ.

ವಿಶೇಷವೆಂದರೆ ಅಶ್ವಿನ್ ತಮ್ಮ 80ನೇ ಟೆಸ್ಟ್ ಪಂದ್ಯದಲ್ಲಿ ಮಾತ್ರ ಈ ಸಾಧನೆ ಮಾಡಿದ್ದಾರೆ. ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದವರಲ್ಲಿ ಇದೀಗ 14ನೇ ಸ್ಥಾನಕ್ಕೆ ತಲುಪಿದ್ದಾರೆ. 2021ರಲ್ಲಿ ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದವರಲ್ಲಿ ರವಿಚಂದ್ರನ್ ಅಶ್ವಿನ್ ಅವರ ಹೆಸರು ಈಗ ಅಗ್ರಸ್ಥಾನದಲ್ಲಿದೆ. ರವಿಚಂದ್ರನ್ ಅಶ್ವಿನ್ 2021ರಲ್ಲಿ 40 ವಿಕೆಟ್ ಪಡೆದಿದ್ದರೆ, ಪಾಕಿಸ್ತಾನದ ಶಾಹೀನ್ ಅಫ್ರಿದಿ 39 ವಿಕೆಟ್ ಪಡೆದಿದ್ದಾರೆ.