ವಿಎನ್.ಡಿ.ಪಿ.ಎಸ್ ಕೋರ್ಟ್ ನಿಂದ ಜಾಮೀನು ಅರ್ಜಿ ವಜಾ: ಬಾಂಬೆ ಹೈಕೋರ್ಟ್ಗೆ ಮೊರೆ ಹೋದ ಅರ್ಜಿ ಆರ್ಯನ್ ಖಾನ್

ಮುಂಬೈ : ಡ್ರಗ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್‌ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದೆ. ಈ ಬೆನ್ನಲ್ಲೇ ಜಾಮೀನಿಗಾಗಿ ಆರ್ಯನ್ ಖಾನ್ ಬಾಂಬೆ ಹೈಕೋರ್ಟ್ನ ಮೊರೆ ಹೋಗಿದ್ದಾರೆ.
ಅಕ್ಟೋಬರ್ 3ರಂದು ಎನ್.ಸಿ.ಬಿ ಯಿಂದ ಕ್ರೂಸ್ ಶಿಪ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್ ತಾರೆ ಶಾರುಖ್ ಖಾನ್ ಮಗ ಆರ್ಯನ್ ಆರ್ಯನ್ ಖಾನ್ ಗೆ ಜಾಮೀನು ನೀಡುವಂತೆ ಮುಂಬೈನ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಸೇರಿದಂತೆ ಇನ್ನು ಮೂವರಿಗೆ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.
ಕಳೆದ 12 ದಿನಗಳಿಂದ ಮುಂಬೈನ ಅರ್ಥರ್ ರಸ್ತೆ ಜೈಲಿನಲ್ಲಿರುವ ಆರ್ಯನ್ ಖಾನ್ ಗೆ ಈ ಮೊದಲು ಮ್ಯಾಜಿಸ್ಟ್ರೇಟ್ ಕೋರ್ಟ್ ನಿಂದ ಜಾಮೀನು ಲಭಿಸಿರಲಿಲ್ಲ. ನಂತರ ವಿಶೇಷ ಸೆಷನ್ಸ್ ಕೋರ್ಟ್ ನಲ್ಲಿ ಸಲ್ಲಿಕೆಯಾದ ಜಾಮೀನು ಅರ್ಜಿಯ ತೀರ್ಪನ್ನು ಇಂದಿಗೆ ಕಾದಿರಿಸಲಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ. ಜಾಮೀನು ಅರ್ಜಿಯನ್ನು ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯ ತಿರಸ್ಕರಿಸಿದ್ದರ ವಿರುದ್ಧ ಆರ್ಯನ್ ಪರ ವಕೀಲರು ಇಂದು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ನಾಳೆಯೇ ಆರ್ಯನ್ ಖಾನ್ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.