ಶಾಸಕ ಜಮೀರ್ ಮನೆ ಮೇಲಿನ ಇಡಿ ದಾಳಿ ಉದ್ದೇಶಪೂರ್ವಕ ದಾಳಿ ಅಲ್ಲ- ಸಚಿವ ಕೆ.ಎಸ್ ಈಶ್ವರಪ್ಪ.

 ಶಾಸಕ ಜಮೀರ್ ಮನೆ ಮೇಲಿನ ಇಡಿ ದಾಳಿ ಉದ್ದೇಶಪೂರ್ವಕ ದಾಳಿ ಅಲ್ಲ- ಸಚಿವ ಕೆ.ಎಸ್ ಈಶ್ವರಪ್ಪ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲಿನ ದಾಳಿ ಉದ್ದೇಶಪೂರ್ವಕ ದಾಳಿ ಅಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.ಈ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಐಎಂಎ ಹಗರಣದಲ್ಲಿ ಜಮೀರ್, ರೋಷನ್ ಬೇಗ್ ಹೆಸರು ಕೇಳಿ ಬಂದಿದೆ. ಇದರಲ್ಲಿ ತಮ್ಮ ಪಾತ್ರ ಇಲ್ಲ ಎಂದು ಅವರು ಸಾಭೀತುಪಡಿಸಲಿ. ಬಡವರು ಕಾರ್ಮಿಕರು ಹಣ ಕಳೆದುಕೊಂಡಿದ್ದಾರೆ ಎಂದರು.

ಸಿದ್ಧರಾಮಯ್ಯ ವಿರುದ್ಧ ಲೇವಡಿ ಮಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಎಲ್ಲರಿಗೂ ಒಳ್ಳೆಯ ಕನಸು ಬಿದ್ದರೆ ಸಿದ್ದರಾಮಯ್ಯ ಅವರಿಗೆ ಕೆಟ್ಟ ಕನಸು ಬೀಳುತ್ತದೆ. ಅವರ ಕನಸು ಈ ಜನ್ಮದಲ್ಲಿ‌ ನನಸು ಆಗುವುದಿಲ್ಲ. ರಾಜ್ಯದಲ್ಲಿ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲ್ಲ ಎಂದರು.