ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಲಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ದಿನೇ- ದಿನೇ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ಮೇರೆಗೆ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಅದೇಶದವರೆಗೆ ಪರೀಕ್ಷೆ ರದ್ದುಗೊಳಿಸಿ ತರಗತಿಗಳನ್ನೂ ಮುಂದೂಡಲು ಆದೇಶ ಹೊರಡಿಸಲಾಗಿದೆ. ನಿನ್ನೆಯಿಂದ (ಆ. 2) ಮಂಗಳೂರು ವಿವಿಯ ಪದವಿ ಪರೀಕ್ಷೆಗಳು ಆರಂಭವಾಗಿದ್ದವು. ಈ ಮುನ್ನ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿತ್ತು. ಅಲ್ಲದೇ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, […]Read More
ಬಡತನ ರೇಖೆಗಿಂತ ಕಡಿಮೆ ಮಟ್ಟದಲ್ಲಿರುವ ಕುಟುಂಬದ ದುಡಿಯುವ ಸದಸ್ಯರು ಕೋವಿಡ್ – 19ರ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಲ್ಲಿ 1 ಲಕ್ಷ ರೂ. ಪರಿಹಾರಧನವನ್ನು ನೀಡಲು ಸರ್ಕಾರ ಆದೇಶಿಸಿದ್ದು, ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ. ಆಯಾ ತಾಲೂಕು ಕಚೇರಿಗಳಲ್ಲಿ ಅರ್ಜಿ ಪಡೆದು ನಿಗದಿತ ನಮೂನೆಗಳಲ್ಲಿ ಭರ್ತಿ ಮಾಡಿ, ಕೋವಿಡ…-19 ವೈರಾಣು ಸೋಂಕಿನಿಂದ ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯದಿಂದ ಅಧಿಕೃತವಾಗಿ ಗುರುತಿಸಿದ ಕೋವಿಡ್ ಪಾಸಿಟಿವ್ ವರದಿ, ಕೋವಿಡ್ ದೃಢಪಟ್ಟರೋಗಿಯ ಸಂಖ್ಯೆ ಹಾಗೂ ವೈದ್ಯರಿಂದ ದೃಢೀಕರಣ ಮಾಡಿಸಿ […]Read More
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳ ಬಳಿಕ ಇದೀಗ ರಾಜ್ಯದ ತಮಿಳುನಾಡಿನ ಗಡಿಭಾಗಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ರಾಮನಗರ, ಕೋಲಾರ, ಚಾಮರಾಜನಗರ ಜಿಲ್ಲೆಯ ಗಡಿಭಾಗಗಳಲ್ಲಿ ಅನೇಕ ಚೆಕ್ಪೋಸ್ಟ್ಗಳನ್ನು ರಚಿಸಿ ತೀವ್ರ ತಪಾಸಣೆ ನಡೆಸಲಾಗುತ್ತಿದ್ದು ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ರಾಜ್ಯಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗುತ್ತಿದೆ. ತಮಿಳುನಾಡಿನೊಂದಿಗೆ ಗಡಿ ಹಂಚಿಕೊಂಡಿರುವ ರಾಮನಗರ ಜಿಲ್ಲೆಯ ಗಡಿ ಭಾಗದ ಗ್ರಾಮಗಳಾದ ಕನಕಪುರ ತಾಲೂಕಿನ 4 ಕಡೆಗಳಲ್ಲಿ ಚೆಕ್ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ನೆರೆರಾಜ್ಯದಿಂದ ಬರುವ ಪ್ರತಿಯೊಂದು ವಾಹನದ ತಪಾಸಣೆ ನಡೆಸಲಾಗುತ್ತಿದ್ದು ಕೋವಿಡ್ ಪರೀಕ್ಷಾ ವರದಿ […]Read More