ನವದೆಹಲಿ: ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಬರದ ಸಿದ್ಧತೆ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಸೂಚಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಸೂಚನೆ ನೀಡಿದ್ದಾರೆಂದು ಕಾಂಗ್ರೆಸ್’ನ ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರು ಹೇಳಿದ್ದಾರೆ. ಗೋವಾದಲ್ಲಿ ಆಡಳಿತರೂಢ ಬಿಜೆಪಿಯನ್ನು ಸೋಲಿಸಿ, ಬಹುಮತದ ಮೂಲಕ ಗೆಲುವು ಸಾಧಿಸಬೇಕೆಂದು ರಾಹುಲ್ ಗಾಂಧಿ ಬಯಸಿದ್ದಾರೆ. […]Read More
ನ್ಯೂರ್ಯಾಕ್: ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಮತ್ತೆ ಜಮ್ಮು ಹಾಗೂ ಕಾಶ್ಮೀರದ ವಿವಾದವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತ ಪಾಕಿಸ್ತಾನದ ನಿಲುವಿಗೆ ತಿರುಗೇಟು ನೀಡಿದೆ. ‘ಜಮ್ಮು – ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿವೆ. ಕೂಡಲೇ ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭೂಪ್ರದೇಶಗಳನ್ನು ಖಾಲಿ ಮಾಡಬೇಕು’ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಸ್ನೇಹ ದುಬೆ ಹೇಳಿದ್ದಾರೆ.ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ […]Read More
ನವದೆಹಲಿ: ಸೆ. 30ರಂದು ಪಶ್ಚಿಮ ಬಂಗಾಳದ 3 ವಿಧಾನಸಭಾ ಕ್ಷೇತ್ರಗಳು ಹಾಗೂ ಒರಿಸ್ಸಾದ 1 ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಂಗಾಳದ ಸಂಸರ್ ಗಂಜ್, ಜಂಗೀಪುರ, ಬಾಬಿನೀಪುರ ಹಾಗೂ ಒಡಿಶಾದ ಪಿಪ್ಲಿಯ ಎರಡು ಸ್ಥಾನಗಳಿಗೆ ಉಪಚುನಾವಣೆ ಘೋಷಿಸಲಾಗಿದ್ದು, ಉಳಿದ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆ. 13 ಕೊನೆಯ ದಿನವಾಗಿದೆ. ನಾಮಪತ್ರ ವಾಪಾಸ್ ಪಡೆಯಲು ಸೆ. 16 ಕೊನೆಯ ದಿನವಾಗಿದೆ. ಸೆ.30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ […]Read More
ನವ ದೆಹಲಿ : ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ದ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಸೆ.5ಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ, ಮಹಾ ಪಂಚಾಯತ್ ನನ್ನು ಆಯೋಜಿಸಿದೆ. ಈ ಬಗ್ಗೆ ಮಾತನಾಡಿದ ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟಿಕಾಯತ್, ಮಹಾ ಪಂಚಾಯತ್ ಗೆ ದೇಶದಾದ್ಯಂತ ಸಹಸ್ರಾರು ರೈತರು ಭಾಗವಹಿಸಲಿದ್ದಾರೆ. ಮಹಾ ಪಂಚಾಯತ್ ಗೆ ಬರುವ ರೈತರನ್ನು ಯಾರಿಂದಲೂ ತಡೆಯುವುದಕ್ಕೆ ಸಾಧ್ಯವಿಲ್ಲ. ಒಂದು ವೇಳೆ ರೈತರನ್ನು ತಡೆದರೇ, ನಾವು ಅದನ್ನು ಮೀರುತ್ತೇವೆ. ನಮ್ಮ ಗುರಿಯನ್ನು ತಲುಪಿಯೇ ತಲುಪುತ್ತೇವೆ ಎಂದು […]Read More
ನವದೆಹಲಿ: ಸರ್ಕಾರದ ಸುಳ್ಳುಗಳ ಬಯಲು ಮಾಡುವ ಕರ್ತವ್ಯ ಸಾರ್ವಜನಿಕ ಬುದ್ಧಿಜೀವಿಗಳದ್ದಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಡಿ ವೈ ಚಂದ್ರಚೂಡ್ ಹೇಳಿದ್ದಾರೆ. ದೇಶದ ಆರನೇ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಎಂ.ಸಿ ಚಗ್ಲಾ ನೆನಪಿನಾರ್ಥವಾಗಿ ನಡೆದ ಸ್ಮಾರಕ ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಮೂರ್ತಿ, ಚಂದ್ರಚೂಡ್ ಅವರು, ‘ಪ್ರಜಾಪ್ರಭುತ್ವದಲ್ಲಿ ಸರ್ಕಾರಗಳನ್ನು ಹೊಣೆಯಾಗಿಸುವುದು ಅಗತ್ಯವಾಗಿದೆ ಹಾಗೂ ಸುಳ್ಳುಗಳು, ನಕಲಿ ಸುದ್ದಿಗಳ ವಿರುದ್ಧ ರಕ್ಷಣೆ ಪಡೆಯಬೇಕಿದೆ. ಸರ್ಕಾರದ ಸುಳ್ಳುಗಳನ್ನು ಬಯಲುಗೊಳಿಸುವ ಕರ್ತವ್ಯ ಸಾರ್ವಜನಿಕ ಬುದ್ಧಿಜೀವಿಗಳಿಗಿದೆ ಎಂದು ಹೇಳಿದ್ದಾರೆ. ಸರ್ವಾಧಿಕಾರಿ ಸರ್ಕಾರಗಳು ತಮ್ಮ ಅಧಿಕಾರವನ್ನು ಇನ್ನಷ್ಟು […]Read More
ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಆತ್ಮವಿಶ್ವಾಸ ಬಂಗಾಳ ವಿಧಾನ ಸಭಾ ಚುನಾವಣೆ ಗೆದ್ದ ಮೇಲೆ ಇಮ್ಮಡಿಯಾದಂತೆ ಕಾಣಿಸುತ್ತಿದೆ. ಅಲ್ಲದೇ ಪಶ್ಚಿಮ ಬಂಗಾಳದ ಅಕ್ಕಪಕ್ಕದ ರಾಜ್ಯಗಳಿಗೂ ತನ್ನ ತೆಕ್ಕೆಯನ್ನು ವಿಸ್ತರಿಸಲು ಹವಣಿಸುತ್ತಿರುವ ಟಿಎಂಸಿ ಈಗ ತ್ರಿಪುರಾದಲ್ಲಿ ತನ್ನ ಭೂಮಿಕೆಯನ್ನು ಸಿದ್ದ ಮಾಡಿಕೊಳ್ಳುತ್ತಿದೆ. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಬೆಂಗಾವಲು ಪಡೆಯ ಮೇಲೆ ದಾಳಿಯ ಕುರಿತು ರಾಜ್ಯ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ […]Read More
ಕಿಶೋರ್ ಅವರಿಗೆ ಕಾಂಗ್ರೆಸ್ ಪಕ್ಷ ಮಣೆಹಾಕಲಿದೆಯೇ ಎಂಬುದು ಕಾದು ನೋಡಬೇಕಾಗಿದ್ದು ತನ್ನನ್ನು ತಾನೇ ಪರಿಷ್ಕರಿಸಿಕೊಳ್ಳುವ ಮತ್ತು ರೂಪಿಸಿಕೊಳ್ಳುವ ಬದಲಾವಣೆಯನ್ನು ಕಾಂಗ್ರೆಸ್ ಒಪ್ಪಿಕೊಳ್ಳಬಹುದೇ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಬೇಕಾಗಿದೆ.ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಚುನಾವಣಾ ಕಾರ್ಯತಂತ್ರ ನಿಪುಣನೆಂದೇ ಖ್ಯಾತರಾದ ಪ್ರಶಾಂತ್ ಕಿಶೋರ್ ರಾಜೀನಾಮೆ ನೀಡಿದ್ದಾರೆ. ಪ್ರಶಾಂತ್ ಅವರ ಈ ನಿರ್ಧಾರವು ಹಲವಾರು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದ್ದು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆಯೇ ಎಂಬ ಮಾತುಗಳೂ ಪಕ್ಷದಲ್ಲಿ ಕೇಳಿಬರುತ್ತಿದೆ. ಒಟ್ಟಿನಲ್ಲಿ ಪ್ರಶಾಂತ್ ಕಾಂಗ್ರೆಸ್ಗೆ ಸೇರ್ಪಡೆಗೊಂಡರೆ […]Read More
ಸಿಧು ನೇಮಕಾತಿಯ ವಿಷಯದಲ್ಲೇ ಕ್ಯಾಪ್ಟನ್ ತಗಾದೆ ತೆಗೆದಿದ್ದರು, ಈಗ ಕಿಶೋರ್ ರಾಜಿನಾಮೆಯಿಂದ ರಾಜ್ಯ ರಾಜಕಾರಣದಲ್ಲಿ ಕ್ಯಾಪ್ಟನ್ ಸಂಪೂರ್ಣವಾಗಿ ಏಕಾಂಗಿಯಾಗಬಹುದು ಎಂದು ಸೂಚಿಸುತ್ತದೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕ್ರಮೇಣ ಕಾಂಗ್ರೆಸ್ ಹೈಕಮಾಂಡ್ ಜೊತೆಗಿನ ಸಂಬಂಧ, ವಿಷಯಗಳಿಂದ ಪ್ರತ್ಯೇಕವಾಗಿರುವುದನ್ನು ಕಂಡುಕೊಂಡಿದ್ದಾರೆಯೇ? ಏಕೆಂದರೆ ಇತ್ತೀಚಿನ ಬೆಳವಣಿಗೆಯಲ್ಲಿ ಸದಾ ಹಿನ್ನಡೆಯನ್ನೇ ಅನುಭವಿಸುತ್ತಿರುವ ಕ್ಯಾಪ್ಟನ್ ಮಂಕಾಗಿದ್ದಾರೆಯೇ? ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಪ್ರಶಾಂತ್ ಕಿಶೋರ್ ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ರಾಜೀನಾಮೆ ನೀಡಿರುವುದು […]Read More
ಪ್ರಸ್ತುತ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ, ಕರಾಳ ಕೃಷಿ ಕಾನೂನುಗಳು ಮತ್ತು ಕಳಪೆ ಕಾನೂನು ಮತ್ತು ಸುವ್ಯವಸ್ಥೆಯಂತಹ ಸಮಸ್ಯೆಗಳನ್ನು ಎತ್ತಿ ಹಿಡಿಯಲು ಸಮಾಜವಾದಿ ಪಕ್ಷವು ಗುರುವಾರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ‘ಸೈಕಲ್ ಯಾತ್ರೆ’ ಆರಂಭಿಸಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು 2022 ವಿಧಾನಸಭಾ ಚುನಾವಣೆಯಲ್ಲಿ ಎಸ್ಪಿ 400 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ನಿರ್ಮಿಸಲಿದೆ. ಉತ್ತರ ಪ್ರದೇಶದ ಜನರು ಬಿಜೆಪಿ ಸರ್ಕಾರದ ಆಡಳಿತ ವೈಖರಿ ಬಗ್ಗೆ […]Read More