ನಂಜನಗೂಡು:, ಮಹಿಳೆಯರು ತಮ್ಮದೇ ಅಸ್ತಿತ್ವ ಕಟ್ಟಿಕೊಳ್ಳಲು ಸಾವಿತ್ರಿ ಬಾಯಿಫುಲೆ ಶಿಕ್ಷಕಿಯರ ಸಂಘ ಸಹಕಾರಿಯಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸರಸ್ವತಿ ಹೇಳಿದರು. ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಸಂಘದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂಘವು ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. , ಸಾವಿತ್ರಿ ಬಾಯಿಫುಲೆ ಶಿಕ್ಷಕಿಯರ ಸಂಘದ ರಾಜ್ಯದ ಮೊದಲ ಮಹಿಳಾ ಶಿಕ್ಷಕಿಯರ ಸಂಘವಾಗಿದ್ದು, ತನ್ನ ಉದ್ದೇಶಿತ ಯೋಜನೆಯ ಈಡೇರಿಕೆಗೆ […]Read More
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸ್ಫೋಟ ಮುಂದುವರೆದಿದೆ. ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯಾಧ್ಯಂತ 32,793 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರವರು ತಮ್ಮ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯದಲ್ಲಿ 32,793ಜನರಿಗೆ ಕೋವಿಡ್ ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆಯಾಗಿವೆ. ಇಂದು ರಾಜ್ಯದಲ್ಲಿ 32,793 […]Read More
ಕನ್ನಡದ ಹಿರಿಯ, ಬಂಡಾಯ ಸಾಹಿತಿ ಚಂದ್ರಶೇಖರ್ ಪಾಟೀಲ್ (83) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಚಂಪಾ ಎಂದೇ ಪ್ರಸಿದ್ಧವಾಗಿದ್ದ ಚಂದ್ರಶೇಖರ್ ಪಾಟೀಲ್, ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳಲ್ಲಿ ಗುರುತಿಸಿಕೊಂಡಿದ್ದರು. ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್ 18 ರಂದು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. […]Read More
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಇಂದು ಸಹ ರಾಜ್ಯದಲ್ಲಿ ಬ್ಲಾಸ್ಟ್ ಆಗಿದೆ.. ಬೆಂಗಳೂರಿನಲ್ಲಿ ಹೊಸದಾಗಿ 9020 ಸೇರಿದಂತೆ ರಾಜ್ಯಾಧ್ಯಂತ 12 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,89,499 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.ಇವರಲ್ಲಿ ಬೆಂಗಳೂರಿನಲ್ಲಿ 9,020 ಸೇರಿದಂತೆ ರಾಜ್ಯದಲ್ಲಿ 12 ಸಾವಿರ ಜನರಿಗೆ ಕೋವಿಡ್ ಹೊಸದಾಗಿ ದೃಢಪಟ್ಟಿದೆ […]Read More
ಬೆಂಗಳೂರು: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿಪಕ್ಷವಾದ ಕಾಂಗ್ರೆಸ್ ಮೇಲುಗೈ ಸಾಧಇಸಿದ್ದು, ಆಡಳಿತರೂಢ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಡಿಸೆಂಬರ್ 27ರಂದು ನಡೆದ ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಾಂಗ್ರೆಸ್ ಹೆಚ್ಚು ಸ್ಥಾನ ಗದ್ದು ಬೀಗಿದೆ. ಐದು ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳ 1185 ವಾರ್ಡ್ಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಪಕ್ಷಕ್ಕಿಂತ ಪ್ರತಿಪಕ್ಷ ಕಾಂಗ್ರೆಸ್ ಮುನ್ನಡೆ ಸಾಸಿದೆ. ಜೆಡಿಎಸ್ ಮೂರನೆ ಸ್ಥಾನದಲ್ಲಿದ್ದು, […]Read More
ಮೈಸೂರು: ರಾಜ್ಯದಲ್ಲಿ ಭ್ರಷ್ಟಚಾರ ಮಿತಿ ಮೀರಿದ್ದು, ಬಿಜೆಪಿ ಸರ್ಕಾರವನ್ನು ವಜಾ ಮಾಡುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿಗಳ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಸಿದ ಅವರು, ನಮ್ಮ ಅವಧಿಯಲ್ಲಿ ನಡೆದಿರುವ ಟೆಂಡರ್ ಗಳ ಬಗ್ಗೆಯೂ ಸರ್ಕಾರ ತನಿಖೆ ನಡೆಸಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಒಂದು ಲಕ್ಷ ಗುತ್ತಿಗೆದಾರರು ಸದಸ್ಯರಾಗಿರುವ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. […]Read More
ಕೋಲಾರ: ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ಜಿಲ್ಲೆಯ ಬಹುತೇಕ ಕೆರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ಭಾರಿ ಪ್ರಮಾಣದ ನೀರು ಹರಿದು ಬಂದಿದ್ದು, ದೊಡ್ಡ ಕೆರೆಗಳು ಕೊಡಿ ಹರಿಯುತ್ತಿವೆ. ನಿರಂತರ ಮಳೆಗೆ ಬೂದಿಕೋಟೆಯ ಮಾರ್ಕಂಡೇಯ ಡ್ಯಾಂ ಕೊಡಿ ಹರಿದಿದೆ.2005ರ ನಂತರ ಮಾರ್ಕಂಡೇಯ ಕೆರೆ ಕೊಡಿ ಹರಿದಿದ್ದು, ಈ ಭಾಗದ ಜನರಲ್ಲಿ ಸಂತಸ ತಂದಿದೆ. ಸುಮಾರು 16 ವರ್ಷಗಳ ನಂತರ […]Read More
ತುಮಕೂರು: ರೈತ ಚಳುವಳಿಗೆ ಮಣಿದು, ಕ್ಷಮೆ ಕೋರಿ ಕೃಷಿ ಕಾಯ್ದೆಗಳನ್ನು ಹಿಂಪಡೆದ ಮೋದಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ರೈತ ಸಂಘಟನೆಗಳು ವಿವಿಧೆಡೆ ಸಂಭ್ರಮಾಚರಣೆ ನಡೆಸಿದವು. ತಿಪಟೂರು ನಗರದ ನಗರಸಭಾ ಕಚೇರಿ ಮುಂಭಾಗ ಸೇರಿದ ಪ್ರಗತಿಪರ ರೈತ ಸಂಘಟನೆಗಳ ನಾಯಕರು, ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು. ಈ ವೇಳೆ ಮಾತನಾಡಿದ ರೈತ-ಕೃಷಿ ಕಾರ್ಮಿಕ ಸಂಘಟನೆ(ಆರ್.ಕೆ.ಎಸ್) ಜಿಲ್ಲಾ ಸಂಚಾಲಕರಾದ ಎಸ್.ಎನ್ ಸ್ವಾಮಿ, ಮೂರು ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ಪ್ರಧಾನ ಮಂತ್ರಿಗಳು ಘೋಷಣೆ ಮಾಡಿದ್ದಾರೆ. ಇದು ರೈತ […]Read More
ಬೆಂಗಳೂರು: ಬಿಟ್ ಕಾಯಿನ್ ಹಗರಣ ಹೊರಬಿದ್ದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬೆಳವಣಿಗೆಗಳು ಶುರುವಾಗಿವೆ. ಹಲವು ಕಡೆಗಳಲ್ಲಿ ಚಟುವಟಿಕೆ ಬಿರುಸಾಗಿವೆ. ಸೈಲೆಂಟಾಗಿದ್ದ ಯಡಿಯೂರಪ್ಪ ಅವರ ಮನೆ ಇದೀಗ ಚಟುವಟಿಕೆಯ ಕೇಂದ್ರವಾಗಿ ಬದಲಾಗಿದೆ. ಬಿಜೆಪಿ ನಾಯಕರ ಮನೆಮನೆ ಓಡಾಟ ಹೆಚ್ಚಾಗಿದೆ. ಈ ಬೆಳವಣಿಗೆಗಳು ರಾಜ್ಯದಲ್ಲಿ ಮಹತ್ತರ ಬದಲಾವಣೆಯ ಬಗ್ಗೆ ಸುಳಿವು ನೀಡ್ತಿವೆ. ಸಿಎಂ, ರಾಜ್ಯಾಧ್ಯಕ್ಷರ ಕುರ್ಚಿಗೆ ಬಂತಾ ಆಪತ್ತು..? ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಬಿಟ್ ಕಾಯಿನ್ ಹಗರಣದ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ- ಕಾಂಗ್ರೆಸ್ ನಾಯಕರ […]Read More
ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಬಿಟ್ಕಾಯಿನ್ ಹಗರಣ ದಿನದಿಂದ ದಿನಕ್ಕೆ ಒಂದೋಂದು ತಿರುವು ಪಡೆಯುತ್ತಿದೆ. ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆಯಾದರೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮೂರನೆ ಮುಖ್ಯಮಂತ್ರಿಯನ್ನು ನೋಡಬೇಕಾಗುತ್ತದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಟ್ಕಾಯಿನ್ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿಯಾಗಿದ್ದಾರೆ ಎಂದು ನಾನು ಹೇಳುವುದಿಲ್ಲ. ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಯಾರೆಲ್ಲ ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದು ಗೊತ್ತಿದೆ. ನಿಷ್ಪಕ್ಷಪಾತ ತನಿಖೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಹಗರಣ ಬಲಿ […]Read More