ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಬಿಟ್ಕಾಯಿನ್ ಹಗರಣ ದಿನದಿಂದ ದಿನಕ್ಕೆ ಒಂದೋಂದು ತಿರುವು ಪಡೆಯುತ್ತಿದೆ. ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆಯಾದರೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮೂರನೆ ಮುಖ್ಯಮಂತ್ರಿಯನ್ನು ನೋಡಬೇಕಾಗುತ್ತದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಟ್ಕಾಯಿನ್ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿಯಾಗಿದ್ದಾರೆ ಎಂದು ನಾನು ಹೇಳುವುದಿಲ್ಲ. ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಯಾರೆಲ್ಲ ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದು ಗೊತ್ತಿದೆ. ನಿಷ್ಪಕ್ಷಪಾತ ತನಿಖೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಹಗರಣ ಬಲಿ […]Read More
ಮೈಸೂರು: ಉಪಚುನಾಣೆ ಫಲಿತಾಂಶ ಭವಿಷ್ಯದ ದಿಕ್ಸೂಚಿ ಅಲ್ಲ ಎಂದು ಮೈಸೂರು ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಹೇಳಿದ್ದಾರೆ. ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಮತದಾರರ ತೀರ್ಪನ್ನು ಜೆಡಿಎಸ್ ಮನಃಪೂರ್ವಕವಾಗಿ ಗೌರವಿಸಲಿದೆ. ಆಡಳಿತಾರೂಢ ಪಕ್ಷ ಬಿಜೆಪಿಯ ಹಣಬಲ, ತೋಳ್ಬಲ ಹಾಗೂ ಕಾಂಗ್ರೆಸ್ ಪಕ್ಷದ ಕುತಂತ್ರ ರಾಜಕಾರಣಕ್ಕೆ ಜೆಡಿಎಸ್ ಬಲಿಯಾಗಿದೆ ಎಂದು ದೂರಿದರು. ಮುಂದುವರೆದು ಜೆಡಿಎಸ್ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಹೈಜಾಕ್ ಮಾಡಿ ಕರೆದುಕೊಂಡು ಹೋದರೆ, ಬಿಜೆಪಿ ಪಕ್ಷ ಹಣಬಲ, ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಈಗಾಗಲೇ ಸಾಕ್ಷಿ ಸಮೇತ ಜಗಜ್ಜಾಹಿರಾಗಿದೆ […]Read More
ಬೆಂಗಳೂರು: ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಬಿಜೆಪಿಯಲ್ಲಿ ಬಿ.ಎಸ್ ಯಡಿಯೂರಪ್ಪ ಹಾಗೂ ಪುತ್ರ ವಿಜಯೇಂದ್ರ ಕಡೆಗಣಿಸಲಾಗುತ್ತಿದೆ ಎಂಬ ಮಾತು ಕೇಳಿ ಬುರುತ್ತಿದೆ. ಇದಕ್ಕೆ ಇತ್ತೀಚಿನ ಬಿಜೆಪಿ ನಿರ್ಧಾರಗಳೇ ಪುಷ್ಠಿ ನೀಡುತ್ತಿವೆ. ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಎರಡೂ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಸ್ಥಾನ ಸಿಗದಿರುವುದು, ಅವರ ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಸಿಂಧಗಿ ವಿಧಾನ ಸಭೆ ಕ್ಷೇತ್ರಕ್ಕೆ ಗೋವಿಂದ್ […]Read More
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದ್ದು, ಪಟ್ಟಿಯನ್ನು ಹೈಕಮಾಂಡ್ ಗೆ ರವಾನಿಸಿದೆ. ಉಪಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ನಡೆದಿದ್ದ ಬಿಜೆಪಿ ಕೋರ್ ಕಮಿಟಿ, ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ. ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹಾನಗಲ್ ಹಾಗೂ ಸಿಂದಗಿ ಕ್ಷೇತ್ರ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆಯಿತು. ಸಭೆಯಲ್ಲಿ 3-4 ಜನರ ಹೆಸರನ್ನು […]Read More
ಲಖ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ತಮ್ಮ ಕಾರ್ ಚಾಲನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಿಂದಾಗಿ ಇಬ್ಬರು ರೈತರು ಸಾವನ್ನಪ್ಪಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಉದ್ರಿಕ್ತರಿಂದ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಲಖಿಂಪುರ್ ಖೇರಿಯ ಟಿಕುನಿಯಾದಲ್ಲಿ ಅಜಯ್ ಮಿಶ್ರಾ ಅವರ ಗ್ರಾಮವಾಗಿದ್ದು, ಅಲ್ಲಿ ನಡೆದ ಕಾರ್ಯಕ್ರಮಕ್ಕೆ ಮುನ್ನ ಕೇಂದ್ರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಪ್ರತಿಭಟಿಸುತ್ತಿದ್ದರು, […]Read More
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಬಾನಿಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಇಡೀ ದೇಶದ ಗಮನ ಸೆಳೆದಿದ್ದ ಉಪಚನಾವಣೆಯಲ್ಲಿ ಮಮತಾ ಬ್ಯಾನರ್ಜಿ 58,832 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಮೂಲಕ ತಮ್ಮ ಮುಖ್ಯಮಂತ್ರಿ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, ನಾನು ಭವಾನಿಪುರ ಉಪ ಚುನಾವಣೆಯಲ್ಲಿ 58,832 ಮತಗಳ ಅಂತರದಲ್ಲಿ ಗೆದ್ದಿದ್ದೇನೆ. […]Read More
ನವದೆಹಲಿ: ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಗೋವಾ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಬರದ ಸಿದ್ಧತೆ ಆರಂಭಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ನಡೆಸುವ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಸೂಚಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ಸೂಚನೆ ನೀಡಿದ್ದಾರೆಂದು ಕಾಂಗ್ರೆಸ್’ನ ಗೋವಾ ಉಸ್ತುವಾರಿ ದಿನೇಶ್ ಗುಂಡೂ ರಾವ್ ಅವರು ಹೇಳಿದ್ದಾರೆ. ಗೋವಾದಲ್ಲಿ ಆಡಳಿತರೂಢ ಬಿಜೆಪಿಯನ್ನು ಸೋಲಿಸಿ, ಬಹುಮತದ ಮೂಲಕ ಗೆಲುವು ಸಾಧಿಸಬೇಕೆಂದು ರಾಹುಲ್ ಗಾಂಧಿ ಬಯಸಿದ್ದಾರೆ. […]Read More
ನವದೆಹಲಿ: ಸೆ. 30ರಂದು ಪಶ್ಚಿಮ ಬಂಗಾಳದ 3 ವಿಧಾನಸಭಾ ಕ್ಷೇತ್ರಗಳು ಹಾಗೂ ಒರಿಸ್ಸಾದ 1 ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಂಗಾಳದ ಸಂಸರ್ ಗಂಜ್, ಜಂಗೀಪುರ, ಬಾಬಿನೀಪುರ ಹಾಗೂ ಒಡಿಶಾದ ಪಿಪ್ಲಿಯ ಎರಡು ಸ್ಥಾನಗಳಿಗೆ ಉಪಚುನಾವಣೆ ಘೋಷಿಸಲಾಗಿದ್ದು, ಉಳಿದ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆ. 13 ಕೊನೆಯ ದಿನವಾಗಿದೆ. ನಾಮಪತ್ರ ವಾಪಾಸ್ ಪಡೆಯಲು ಸೆ. 16 ಕೊನೆಯ ದಿನವಾಗಿದೆ. ಸೆ.30 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ […]Read More
ತಮ್ಮ ವಿರುದ್ದ ಸಂದೇಶ್ ಪ್ರಿನ್ಸ್ ಹೋಟೆಲ್ ಸಪ್ಲೇಯರ್ ಮೇಲೆ ಹಲ್ಲೆ ಮಾಡಿರುವ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೆ ನಟ ದರ್ಶನ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ನಟ ದರ್ಶನ್, ಹೋಟೆಲ್ ನಲ್ಲಿ ಊಟ ಕೊಡೋದು ಲೇಟ್ ಆಗಿತ್ತು. ಅದಕ್ಕೆ ಯಾಕಪ್ಪ ಲೇಟಾಯ್ತು ಎಂದು ಕೇಳಿದ್ದೆ. ಅಷ್ಟೆ. ಅದನ್ನ ದೊಡ್ಡು ಮಾಡ್ತಿದ್ದಾರೆ. ನಾನು ಹಲ್ಲೆ ಮಾಡಿದ್ದೇನೆ ಎಂಬುದು ಆರೋಪ ಮಾತ್ರ. ಸಾಬೀತಾಗಿದೆಯಾ ಇಲ್ಲಾ. ಇಂದ್ರಜಿತ್ ಲಂಕೇಶ್ ಆರೋಪವನ್ನ ಸಾಬೀತು ಮಾಡಲಿ ಎಂದು […]Read More
ನಾಳೆ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ನಾಳೆ ರಾಷ್ಟ್ರ ರಾಜಧಾನಿಗೆ ತೆರಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಸಂಜೆ 6.30ರಿಂದ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಮೇಕೆದಾಟು ಯೋಜನೆ (Mekedatu Project) ವಿಚಾರವಾಗಿ ಪ್ರಧಾನಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಸಿಎಂ ಬಿಎಸ್ ವೈ ಜತೆ ಡಿಸಿಎಂ ಗೋವಿಂದ ಕಾರಜೋಳ, ಗೃಹ […]Read More