ಮೈಸೂರು:ಡಾ.ಎಚ್.ಆರ್. ಕೃಷ್ಣಮೂರ್ತಿ ಹೊಸಬೀಡು ಅವರ ಸಾವು ಅರ್ಥಶಾಸ್ತ್ರ ಸಾಹಿತ್ಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಅರ್ಥಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಡಾ.ಬಿ. ಗೋಪಾಲ್ ಸಿಂಗ್ ವಿಷಾದ ವ್ಯಕ್ತಪಡಿಸಿದರು. ನಗರದ ಮಹಾರಾಣಿ ಕಲಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೆಂದ್ರದಲ್ಲಿ ಮೈಸೂರು ಅರ್ಥಶಾಸ್ತ್ರ ಅಧ್ಯಾಪಕರ ಸಂಘ, ಮಹಾರಾಣಿ ಕಲಾ ಕಾಲೇಜು, ಸ್ನಾತಕೋತ್ತರ ಕೇಂದ್ರದ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಡಾ.ಎಚ್.ಆರ್. ಕೃಷ್ಣಮೂರ್ತಿ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ನಾನು ಕಂಡ ಜನಪ್ರಿಯ ಅರ್ಥಶಾಸ್ತ್ರ ಬರಹಗಾರರು, ಜನಪರ ಆಲೋಚಕರಾಗಿದ್ದ ಡಾ.ಎಚ್.ಆರ್. ಕೃಷ್ಣಮೂರ್ತಿ ಅವರ […]Read More
Tags : Mysore
ಮೈಸೂರು: ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ (ಹೊಸ ನ್ಯಾಯಾಲಯದ ರಸ್ತೆ) ಶಿವಾರ್ಚಕ ಸಂಘದ ಉಚಿತ ವಿದ್ಯಾರ್ಥಿ ನಿಲಯಕ್ಕೆ ಶಿವಾರ್ಚಕ ಸಮಾಜದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಕೃತಾಭ್ಯಾಸ, ಪದವಿ (ಬಿಎಸ್ಸಿ, ಎಂಎಸ್ಸಿ, ಬಿಇ, ಎಂ.ಟೆಕ್, ಎಂಬಿಬಿಎಸ್), ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಕಾಲೇಜು ದೃಢೀಕರಣ, ಜಾತಿ ಪ್ರಮಾಣ ಪತ್ರ, ಎರಡು ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಜೂ.30ರೊಳಗೆ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿ ಪ್ರದೀಪ್ ಮೊ: […]Read More
ಮೈಸೂರು: ವಿಶ್ವ ಯೋಗ ದಿನಾಚರಣೆಗಾಗಿ ನಗರಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದಾರೆ. ನಗರದಲ್ಲಿ ಮೋದಿ ಜೂ.20 ಮತ್ತು 21ರಂದು ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದು, ಈ ಎರಡು ದಿನಗಳಲ್ಲಿ ಭದ್ರತೆ ಹಾಗೂ ಆತಿಥ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಾಗುತ್ತಿದೆ. ಮೋದಿ ಕಳೆದ ಬಾರಿ ನಗರಕ್ಕೆ ಭೇಟಿ ನೀಡಿದ ಸಂದರ್ಭ ಸಹ ರ‌್ಯಾಡಿಸನ್ ಬ್ಲೂ ಹೋಟೆಲ್‌ನಲ್ಲೇ ಉಳಿದುಕೊಂಡಿದ್ದರು. ಪ್ರಧಾನಿ ಭೇಟಿ ಸಂದರ್ಭ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಉಳಿದುಕೊಳ್ಳುವ […]Read More