ಮೈಸೂರು: ಶಾಸಕ ಸಾ.ರಾ.ಮಹೇಶ್ ಪತ್ನಿ ಅನಿತಾ ಮಹೇಶ್ 27 ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇಪ್ಪತ್ತೇಳು ವರ್ಷಗಳ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಖಾಸಗಿ ವಿದ್ಯಾರ್ಥಿಯಾಗಿ ಪರೀಕ್ಷೆ ಬರೆದಿದ್ದ ಅನಿತಾ ಅವರು, ಕಲಾ ವಿಭಾಗದಲ್ಲಿ 418 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. 1993ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ನಂತರ ಮುಂದಿನ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ.Read More